Premada Hoogara

ಪ್ರೇಮದ ಹೂಗಾರ

ಪ್ರೇಮದ ಹೂಗಾರ

ಪ್ರೇಮದ ಹೂಗಾರ ಈ ಹಾಡುಗಾರ
ಹೂ ನೀಡುತಾನೆ ಮುಳ್ಳು ಬೇಡುತಾನೆ

ಬೆಲ್ಲದ ಬಣಗಾರ ಈ ಹಾಡುಗಾರ
ಸಿಹಿ ನೀಡುತಾನೆ ಕಹಿ ಕೇಳುತಾನೆ

ಮಣ್ಣಿನ ಮಮಕಾರ ತಂಪಿರುವ
ಮಾನದ ಮಣಿಹಾರ ಹೊಂದಿರುವ ಈ ಭಾವ ಜೀವ

ಪ್ರೇಮದ ಹೂಗಾರ ಈ ಹಾಡುಗಾರ
ಹೂ ನೀಡುತಾನೆ ಮುಳ್ಳು ಬೇಡುತಾನೆ

ಗಂಧದ ಕೊರಳಾಗಿ ಸ್ವಂತಕೆ ಬರಡಾಗಿ
ನೋವಿನಲೂ ತೇಯುವುದು ಈ ಒಡಲು
ಗಂಗೆಯು ತಾನಾಗಿ ನೀರಿಗೆ ಎರವಾಗಿ
ಸೇರುತಿದೆ ಕಂಬನಿಯ ಆ ಕಡಲು

ಕರುಣೆಯ ಕುಂಬಾರ
ಕರುಣೆಯ ಕುಂಬಾರ ಈ ಹಾಡುಗಾರ
ಮಣ್ಣು ಬೇಡುತಾನೆ ಕೊಡ ನೀಡುತಾನೆ

ಮಮತೆಯ ಕಲೆಗಾರ ಈ ಹಾಡುಗಾರ
ಮನೆ ಮಾಡುತಾನೆ ಹೊರ ಹೋಗುತಾನೆ

ಗೋವಿನ ಹಾಲಂಥ ಮನಸಿರುವ
ಕೂಸಿನ ಜೇನಂಥ ಮಾತಿರುವ
ಈ ಭಾವ ಜೀವ

ಪ್ರೇಮದ ಹೂಗಾರ ಈ ಹಾಡುಗಾರ
ಹೂ ನೀಡುತಾನೆ ಮುಳ್ಳು ಬೇಡುತಾನೆ

ನಿತ್ಯವೂ ತಾನುರಿದು ಲೋಕಕೆ ದಿನಗರೆದು
ಎಚ್ಚರಿಸೋ ಸೂರ್ಯನಿಗೆ ನಿದ್ದೆಯಿಲ್ಲ
ರಾತ್ರಿಗೆ ತಾನುಳಿದು ತಾಪಕೆ ತಂಪೆರೆದು
ಸಂಚರಿಸೋ ಚಂದ್ರನಿಗೆ ಸ್ವಂತವಿಲ್ಲ
ಊರಿನ ಗೆಣೆಕಾರ
ಊರಿನ ಗೆಣೆಕಾರ ಈ ಹಾಡುಗಾರ
ಕಾಪಾಡುತಾನೆ ಕಡೆಯಾಗುತಾನೆ

ಸತ್ಯದ ಹರಿಕಾರ ಈ ಹಾಡುಗಾರ
ಹೋರಾಡುತಾನೆ ಒಂಟಿಯಾಗುತಾನೆ

ಮಣ್ಣಿನ ಮಮಕಾರ ಕಂಪಿರುವ
ಮಾನದ ಮಣಿ ಹಾರ ಹೊಂದಿರುವ
ಈ ಭಾವ ಜೀವ

ಪ್ರೇಮದ ಹೂಗಾರ ಈ ಹಾಡುಗಾರ
ಹೂ ನೀಡುತಾನೆ ಮುಳ್ಳು ಬೇಡುತಾನೆ



Credits
Writer(s): Hamsalekha
Lyrics powered by www.musixmatch.com

Link