Ello Maleyaagidenu

ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದು ಕನಸೊಂದು ಬೀಳುತಿದೆ
ವ್ಯಾಮೋಹವ ಕೇವಲ ಮಾತಿನಲಿ ಹೇಳಲು ಬರಬಹುದೇ
ನಿನ್ನ ನೋಡಿದ ಮೇಲೆಯೂ ಪ್ರೀತಿಯಲಿ ಬೀಳದೆ ಇರಬಹುದೇ
ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ

ಕಣ್ಣಲಿ ಮೂಡಿದೆ ಹನಿಗವನ ಕಾಯಿಸಿ ನೀ ಕಾಡಿದರೆ
ನೂತನ ಭಾವದ ಆಗಮನ ನೀ ಬಿಡದೆ ನೋಡಿದರೆ
ನಿನ್ನ ಧ್ಯಾನದಿ ನಿನ್ನದೇ ತೋಳಿನಲಿ ಹೀಗೆಯೇ ಇರಬಹುದೇ
ಈ ಧ್ಯಾನವ ಕಂಡರೆ ದೇವರಿಗೂ ಕೋಪವು ಬರಬಹುದೇ

ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದು ಕನಸೊಂದು ಬೀಳುತಿದೆ

ನೆನಪಿನ ಹೂಗಳ ಬೀಸಣಿಗೆ ನೀ ಬರುವ ದಾರಿಯಲಿ
ಓಡಿದೆ ದೂರಕೆ ಬೇಸರಿಕೆ ನೀನಿರುವ ಊರಿನಲಿ
ಅನುಮಾನವೇ ಇಲ್ಲದೆ ಕನಸಿನಲಿ ಮೆಲ್ಲಗೆ ಬರಬಹುದೇ
ಅಲೆಮಾರಿಯ ಹೃದಯದ ಡೇರೆಯಲಿ ನೀನು ಇರಬಹುದೇ

ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದು ಕನಸೊಂದು ಬೀಳುತಿದೆ
ವ್ಯಾಮೋಹವ ಕೇವಲ ಮಾತಿನಲಿ ಹೇಳಲು ಬರಬಹುದೇ
ನಿನ್ನ ನೋಡಿದ ಮೇಲೆಯೂ ಪ್ರೀತಿಯಲಿ ಬೀಳದೆ ಇರಬಹುದೇ
ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ



Credits
Writer(s): Jayanth Kaikini, Manikanth Kadri
Lyrics powered by www.musixmatch.com

Link