Ello Maleyaagidenu

ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದು ಕನಸೊಂದು ಬೀಳುತಿದೆ
ವ್ಯಾಮೋಹವ ಕೇವಲ ಮಾತಿನಲಿ ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲಿ ಬೀಳದೆ ಇರಬಹುದೇ?
ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ

ಕಣ್ಣಲಿ ಮೂಡಿದೆ ಹನಿಗವನ, ಕಾಯಿಸಿ ನೀ ಕಾಡಿದರೆ
ನೂತನ ಭಾವದ ಆಗಮ, ನೀ ಬಿಡದೆ ನೋಡಿದರೆ
ನಿನ್ನ ಗಾನದಿ ನಿನ್ನದೆ ತೋಳಿನಲಿ, ಹೀಗೆಯೆ ಇರಬಹುದೇ?
ಈ ಧ್ಯಾನವ ಕಂಡರೆ ದೇವರಿಗೂ, ಕೋಪವು ಬರಬಹುದೇ?

ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದು ಕನಸೊಂದು ಬೀಳುತಿದೆ

ನೆನಪಿನ ಹೂಗಳ ಬೀಸಣಿಕೆ, ನೀ ಬರುವ ದಾರಿಯಲಿ
ಓಡಿದೆ ದೂರಕೆ ಬೇಸರಿಕೆ, ನೀನಿರುವ ಊರಿನಲಿ
ಅನುಮಾನವೆ ಇಲ್ಲದೆ ಕನಸಿನಲಿ ಮೆಲ್ಲಗೆ ಬರಬಹುದೇ?
ಅಲೆಮಾರಿಯ ಹೃದಯದ ದೇರೆಯಲಿ, ನೀನು ಇರಬಹುದೇ?

ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ
ಇಲ್ಲೇ ಒಲವಾಗಿದೆ ಎಂದು ಕನಸೊಂದು ಬೀಳುತಿದೆ
ವ್ಯಾಮೋಹವ ಕೇವಲ ಮಾತಿನಲಿ ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲಿ ಬೀಳದೆ ಇರಬಹುದೇ?
ಎಲ್ಲೋ ಮಳೆಯಾಗಿದೆ ಎಂದು ತಂಗಾಳಿಯು ಹೇಳುತಿದೆ



Credits
Writer(s): Jayanth Kaikini, Manikanth Kadri
Lyrics powered by www.musixmatch.com

Link